ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ, ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋ…ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ, ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ. ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು, ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ ಹಾಗೂ ಭೂತಾನ, ಪೂರ್ವದಲ್ಲಿ ಮಯನ್ಮಾರ್ ಹಾಗೂ ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ ಶ್ರೀಲಂಕಾ, ಮಾಲ್ಡೀವ್ಸ್ ನಂತಹ ದ್ವೀಪ ರಾಷ್ಟ್ರಗಳಿಗೆ ಹತ್ತಿರವಾಗಿದೆ. ಕೊಳ್ಳುವ ಶಕ್ತಿಯ ಮೇರೆಗೆ, ಪ್ರಪಂಚದ ನಾಲ್ಕನೇ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ.